ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಆಯಾ ಕ್ಷೇತ್ರದ ಮುಖಂಡರು ಹಾಗೂ ಪದಾಧಿಕಾರಿಗಳ ಜತೆ ಕೆಪಿಸಿಸಿ ಕಚೇರಿಯಿಂದ ಸೋಮವಾರ ವಿಡಿಯೋ ಸಂವಾದ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾ. ಜಿ ಸಿ ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮುಖಂಡರಾದ ವಿ ಆರ್ ಸುದರ್ಶನ್, ಆರ್ ವಿ ವೆಂಕಟೇಶ್, ಕೆಂಚೇಗೌಡ ಅಭ್ಯರ್ಥಿ ರಾಮೋಜಿಗೌಡ ಮತ್ತಿತರರು ಇದ್ದರು





