ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಡಿಟೆಕ್ಟಿವ್- ಸೆಕ್ಯೂರಿಟಿ ಏಜೆನ್ಸಿಗಳಿಂದ ಯಾವುದೇ ಟೆಂಡರ್ ಕರೆಯದೇ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಎಎಪಿ ಬೆಂಗಳೂರು ಘಟಕದ ಅಧ್ಯಕ್ಷ ಡಾ. ಸತೀಶ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಬಿಬಿಎಂಪಿ ಶಾಲೆಗಳಲ್ಲಿ ಕಳಪೆ ಫಲಿತಾಂಶ ದಾಖಲಾಗುತ್ತಿದ್ದರೂ ತಲೆಕೆಡಿಸಿಕೊಳ್ಳದ ರಾಜ್ಯ ಸರ್ಕಾರ ಬಿಬಿಎಂಪಿ ಶಾಲೆಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದರು.





