ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಹಿರಿಯೂರಿನ ಕಳವಿಬಾಗಿ ಬಳಿ ನೆಡೆದಿದೆ. ಮೃತರನ್ನು ವಿಶಾಲಾಕ್ಷಮ್ಮ ಮತ್ತು ನಾಗರಾಜ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಐಮಂಗಲ ಠಾಣೆ ಪಿಎಸ್ಐ ಮಾರುತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.





