ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಹಗರಣವನ್ನು ಸಂಬಂಧಿಸಿದಂತೆ ಸಿಬಿಐ ಬೇರೆ ಎಸ್‌ಐಟಿ ತಂಡವು ಬೇರೆ ಮೇಲೆ ತನಿಖೆ ನಡೆಸುವುದಕ್ಕೆ ಸಾಧ್ಯವಿಲ್ಲ. ಈ ಪ್ರಕರಣವನ್ನು ಒಂದೇ ತನಿಖಾ ಸಂಸ್ಥೆ ಮಾತ್ರ ತನಿಖೆ ನಡೆಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಹೇಳಿದರು





