ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ರಚಿಸಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರು ಆಗ್ರಹಿಸಿದರು.
371 ಜೆ ಕಲಂ ಪರಿಣಾಮಕಾರಿ ಅನುಷ್ಠಾನ ಮತ್ತು ಕಲ್ಯಾಣ ಕರ್ನಾಟಕದ ಪ್ರಗತಿಗಾಗಿ ಪ್ರತ್ಯೇಕ ಸಚಿವಾಲಯ ರಚನೆ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರು ರಾಜ್ಯ ಸರಕಾರಕ್ಕೆ ತಾಕೀತು ಮಾಡಿದರು.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 371(ಜೆ) ಆಡಿಯಲ್ಲಿ ನಿಜವಾಗ್ಯೂ ಅಭಿವೃದ್ಧಿ ಕಾರ್ಯಗಳು ನಡೆದಿವೆಯೋ ಇಲ್ಲವೋ ಎಂಬುದನ್ನು
ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ವೇಗ ಮಿತಿಯಲ್ಲಿ ಕೆಲಸಗಳು ನಡೆಯುವಂತೆ ಮೇಲುಸ್ತುವಾರಿ ವಹಿಸಲು ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ ಎಂದು ಸಲಹೆ ನೀಡಿದರು. 371(ಜೆ) ಕಲಂನಿಯಮಾವಳಿಯಂತೆ ನೇಮಕಾತಿಗಳಲ್ಲಿ ಕೃಪಾಂಕ ನೀಡಬೇಕು. ಇದರ ಜೊತೆಗೆ, ಎಲ್ಲರಿಗೂ ನ್ಯಾಯ ದೊರಕುವಂತಾಗಲು ವಯೋಮಾನದಲ್ಲಿ ವಿನಾಯಿತಿ ನೀಡಬೇಕು.371(ಜೆ) ಕಲಂ ಅಡಿ ಬರುವ ವ್ಯಾಜ್ಯಗಳ ನಿವಾರಣೆಗೆ ನಿಯಮದಂತೆ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಪ್ರತ್ಯೇಕ ಟ್ರಿಬ್ಯುನಲ್ ರಚನೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.





