ಕಲಬುರಗಿ ತಾಲೂಕಿನ ಖಣದಾಳ ಗ್ರಾಮ ಪಂಚಾಯತಿಯಲ್ಲಿರುವ ಶ್ರೀ ಜಗದಂಬಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ಗುಂಡು ಬಿ ಚವ್ಹಾಣ್ ಅವರು ಹೇಳಿದ್ದಾರೆ.
ಕಲಬುರಗಿ ತಾಲೂಕಿನ ಖಣದಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಇಟಗಾ(ಕೆ) ಗ್ರಾಮದಲ್ಲಿ ಶ್ರೀ ಜಗದಂಬಾ ಕಿರಿಯ ಪ್ರಾಥಮಿಕ ಶಾಲೆ ಇದ್ದು. ಈ ಶಾಲೆಯು ಸರಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಇದರ ಪ್ರಯುಕ್ತ ದಕ್ಷಿಣ ವಲಯ ಶಿಕ್ಷಣಾಧಿಕಾರಿಗಳಿಗೆ ಪತ್ರಗಳು ನೀಡಿದರೂ ಕ್ರಮಕೈಗೊಂಡಿಲ್ಲ. ಈ ಶಾಲೆಯಲ್ಲಿ ಸುಮಾರು 40 ವಿದ್ಯಾರ್ಥಿಗಳಿದ್ದು, ಈ ಎಲ್ಲಾ ವಿದ್ಯಾರ್ಥಿಗಳ ಜೀವನದ ಜೊತೆಗೆ ಸಂಸ್ಥೆಯು ಮತ್ತು ಶಿಕ್ಷಣಾಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮ ಪಂಚಾಯತ್ ಸದಸ್ಯರಾದ ಗುಂಡು ಬಿ ಚವ್ಹಾಣ್ ಅವರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ





