ಜುಲೈ 27 ರಿಂದ ಮೂರು ದಿನಗಳ ಕಾಲ ಕಲಬುರಗಿಯಲ್ಲಿ ಬೃಹತ್ ಕೃಷಿ ಮೇಳ ಆಯೋಜನೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶಶಿಕಾಂತ ಬಿ ಪಾಟೀಲ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವತಿಯಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜುಲೈ 27,28 ಹಾಗೂ 29 ಮೂರು ದಿನಗಳ ಕಾಲ ಕೃಷಿ ಮೇಳ ಏರ್ಪಡಿಸಲಾಗಿದ್ದು, ಮೇಳಾದಲ್ಲಿ 200ರಿಂದ 250 ಮಳಿಗೆಗಳನ್ನು ಸ್ಥಾಪನೆ ಮಾಡಲಾಗಿತ್ತಿದೆ. ರೈತರು ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಜೇವರ್ಗಿ, ಕೃಷಿ ಉಪಸಮಿತಿ ಅಧ್ಯಕ್ಷ ಜಗದೀಶ ಗಾಜರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.





