Google search engine
ಮನೆUncategorizedನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಶ್ಲಾಘನೀಯ;ಎಂ.ಡಿ ಮಹೆಬೂಬ ಅಲಿ

ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಶ್ಲಾಘನೀಯ;ಎಂ.ಡಿ ಮಹೆಬೂಬ ಅಲಿ

ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು  ಶ್ಲಾಘನೀಯ ನಗರಸಭೆ ಸದಸ್ಯ  ಎಂ.ಡಿ ಮಹೆಬೂಬ ಅಲಿ

 

ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ

 

ಯಾದಗಿರಿ: ಜೂನ್, 24  ( ಕರ್ನಾಟಕ ವಾರ್ತಾ):

 

ವಸತಿ ರಹಿತರಿಗೆ ಇರುವ ಉಚಿತ ಆಶ್ರಯ ಕೇಂದ್ರದಲ್ಲಿ   ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು  ಶ್ಲಾಘನೀಯವಾಗಿದ್ದು  ಈ ಕೇಂದ್ರಕ್ಕೆ ಮೂಲಸೌಕರ್ಯ ಒದಗಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ  ಎಂದು ನಗರಸಭೆ ಸದಸ್ಯ ಎಂ.ಡಿ ಮಹೆಬೂಬ ಅಲಿ ಅವರು ಅಭಿಪ್ರಾಯಪಟ್ಟರು.

 

ನಗರಸಭೆ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ( ಡೇ- ನಲ್ಮಾ) ಅಭಿಯಾನದಡಿಯಲ್ಲಿ ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ವಸತಿರಹಿತರ ಆಶ್ರಯ ಕೇಂದ್ರದಲ್ಲಿ ನಡೆದ  ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು  ಸಸಿಗಳನ್ನು ನೆಟ್ಟು ಹಾಗೂ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

 

ಆರೋಗ್ಯವೇ ಭಾಗ್ಯ, ಆರೋಗ್ಯ ವಾಗಿದ್ದರೆ ಸುಖವಾಗಿ ಬಾಳಬಹುದ ಎಂದರು. ಎಲ್ಲರೂ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದರು.

 

ಕೌಶಲ್ಯಾಭಿವೃದ್ದಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಮಾತನಾಡಿ,  ನಗರದಲ್ಲಿ ಕಾರ್ಮಿಕರಾಗಿದ್ದು, ವಸತಿ ಇಲ್ಲದವರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವ ಉದ್ದೇಶದಿಂದ ಈ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ವಾಸ್ತವ್ಯ ಇರುವವರಿಗೆ ಊಟ, ತಿಂಡಿಯ ಅಗತ್ಯವಿದ್ದರೆ ಅದನ್ನು ಕೂಡ ಒದಗಿಸಿಕೊಡಲಾಗುತ್ತದೆ ಎಂದರು. ಆಶ್ರಯದಲ್ಲಿ ಇರುವವರು ಸ್ವಯಂ ಉದ್ಯೋಗಿಗಳಾಗಲು ಸರ್ಕಾರದ ಹಲವು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆಯಲು ಅಗತ್ಯ ಸಹಕಾರವನ್ನು ಇಲಾಖೆಯಿಂದ ನೀಡುತ್ತೇವೆ ಎಂದರು.

 

ನಗರಸಭೆಯ ಮ್ಯಾನೇಜರ್ ಅಶ್ವಿನಿ ಅವರು ಮಾತನಾಡಿ, ವಸತಿರಹಿತ ನಿರಾಶ್ರಿತರಿಗೆ ಆಶ್ರಯ ನೀಡೋ ನಿಟ್ಟಿನಲ್ಲಿ ಸರ್ಕಾರಗಳು ಅನೇಕ ಯೋಜನೆಗಳನ್ನ ಜಾರಿಗೆ ತಂದಿವೆ.  ಇಂತಹ ನಿರಾಶ್ರಿತರ ರಕ್ಷಣೆ ನಮ್ಮ  ಕರ್ತವ್ಯ ಆಗಿದೆ ಎಂದರು.

 

ಡಾ.ಮಹೇಶ ಅವರು  ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು

 

ಈ ಸಂದರ್ಭದಲ್ಲಿ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ವೈದ್ಯ, ನಗರಠಾಣೆಯ ಎಎಸ್ಐ ಹಸನ್ ಪಟೇಲ್,    ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ದೊಡ್ಡಮನಿ, ನಗರಸಭೆಯ ಸಿಬ್ಬಂದಿಗಳಾದ ಪದ್ಮಾ, ಮಂಜುನಾಥ, ಶಿವಪುತ್ರ, ಸಿಆರ್ಪಿ ಗಳಾದ ಅವ್ವಮ್ಮ, ಪ್ರೇಮಾ ಸಂಸ್ಥೆಯ ವ್ಯವಸ್ಥಾಪಕರಾದ ಮೌನೇಶ ಇಟಗಿ, ಭೀಮಾಶಂಕರ ಕಟ್ಟಿಮನಿ, ಸೇವಕರಾದ ಬೀರಲಿಂಗಪ್ಪ ಕಿಲ್ಲನಕೇರಾ, ಕೇರಟೇಕರಗಳಾದ ಮಲ್ಲು ನಾಟೇಕಾರ, ದೇವಮ್ಮ, ಕೃಷ್ಣ ಸೇರಿದಂತೆ  ನಿರಾಶ್ರಿತರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!