ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು, ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮೈಸೂರು ಮುಡಾದಲ್ಲಿ ಹಗರಣಗಳು ಪರಿಶಿಷ್ಟ ವರ್ಗಗಳಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಸಮಗ್ರ ತನಿಖೆ ಆಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಿಪಿಎಂ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದರು