ಆಳಂದ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅನೇಕ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಅದಕ್ಕೆ ಶಾಸಕ ಬಿ.ಆರ್ ಪಾಟೀಲ್ ಸೇರಿದಂತೆ ಕೆಎಂಎಫ್ ಅಧ್ಯಕ್ಷ ಆರ್ ಕೆ ಪಾಟೀಲ್ ಅವರು ಕುಮ್ಮುಕ್ಕು ನೀಡುತ್ತಿದ್ದಾರೆ ಎಂದು ಹರ್ಷಾನಂದ್ ಗುತ್ತೇದಾರ್ ಆರೋಪಿಸಿದ್ದಾರೆ.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ತಾಲೂಕಿನಲ್ಲಿ ಬಡವರಿಗೆ ಸೇರಬೇಕಾದ ಪಡಿತರ ಆಹಾರ ಧಾನ್ಯ, ಮಧ್ಯಾಹ್ನದ ಬಿಸಿಯೂಟದ ಆಹಾರ ಧಾನ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಹಾರ ಧಾನ್ಯ ಮತ್ತು ಮೊಟ್ಟೆ ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದು ಇದಕ್ಕೆ ಶಾಸಕ ಬಿ.ಆರ್ ಪಾಟೀಲ್ ಮತ್ತು ಕೆಎಂಎಫ್ ಅದ್ಯಕ್ಷ ಆರ್. ಕೆ ಪಾಟೀಲ್ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಅಧಿಕಾರಿಗಳು ಆರ್ ಕೆ ಪಾಟೀಲ್ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮೂರ್ನಾಲ್ಕು ಬಾರಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಪಡಿತರ ಧಾನ್ಯವನ್ನು ಹಿಡಿದು ಪೋಲೀಸರಿಗೆ ಮಾಹಿತಿ ಒದಗಿಸಿದ್ದರೂ ಅಕ್ರಮ ಪಡಿತರ ಧಾನ್ಯ ಸಂಗ್ರಹಿಸಿದವರು ಸುಳ್ಳು ದಾಖಲೆಗಳನ್ನು ನೀಡಿ ಬಿಡುಗಡೆ ಮಾಡಿಕೊಂಡಿದ್ದಾರೆ ಇದರ ವಿರುಧ್ದ ದೂರು ನೀಡಿದರೂ ದೂರು ದಾಖಲಿಸಿಲ್ಲ ಎಂದು ಹೇಳಿದರು





