ರಾಜ್ಯ ಹೈಕೋರ್ಟ್ ವತಿಯಿಂದ ಬೆಂಗಳೂರಿನಲ್ಲಿಂದು ಕರ್ನಾಟಕ ನ್ಯಾಯಾಂಗ ಅಕಾಡೆಮಿಯ 25ನೇ ವರ್ಷದ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು.
ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಅರವಿಂದ ಕುಮಾರ್, ನ್ಯಾಯಮೂರ್ತಿ ನಾಗರತ್ನ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಹಂಜಾರಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಹಿರಿಯ ನ್ಯಾಯಮೂರ್ತಿಗಳು, ವಕೀಲರು ಪಾಲ್ಗೊಂಡಿದ್ದರು.
ಬಳಿಕ ನ್ಯಾಯಮೂರ್ತಿ ಅರವಿಂದ ಕುಮಾರ್, ಇತ್ತೀಚಿನ ದಿನಗಳಲ್ಲಿ ನ್ಯಾಯಾಂಗ ವ್ಯವಸ್ಥೆ ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಒತ್ತು ನೀಡಬೇಕು. ದಕ್ಷತೆ ಹಾಗೂ ಪ್ರಾಮಾಣಿಕತೆ ಹೊಂದಿರುವ, ನ್ಯಾಯಾಂಗ ಹಾಗೂ ಸಾರ್ವಜನಿಕರ ನಡುವಿನ ಸೇತುವೆಯಂತೆ ಇರುವ ವಕೀಲರು ಗಮನಹರಿಸಬೇಕು ಎಂದು ಹೇಳಿದರು.
ನ್ಯಾಯಮೂರ್ತಿ ನಾಗರತ್ನ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಮಾತು ಪ್ರತಿಯೊಬ್ಬರೂ ಕೇಳಿದ್ದೇವೆ. ಅದನ್ನು ನ್ಯಾಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಪಾಲಿಸಬೇಕು. ನ್ಯಾಯವನ್ನು ಎತ್ತಿ ಹಿಡಿಯಬೇಕು ಎಂದರು.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಹಂಜಾರಿಯಾ, ಕರ್ನಾಟಕ ನ್ಯಾಯಾಂಗ ಅಕಾಡೆಮಿಯು 25ನೇ ವರ್ಷ ಪೂರೈಸುತ್ತಿದ್ದು, ಅಕಾಡೆಮಿಗೆ ತನ್ನದೇ ಆದ ಇತಿಹಾಸವಿದೆ, ಸಮಾಜಕ್ಕೆ ಆಧಾರ ಸ್ತಂಭ. ಅದನ್ನು ಹಾಗೆಯೇ ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
Home Uncategorized ರಾಜ್ಯ ಹೈಕೋರ್ಟ್ ವತಿಯಿಂದ ಬೆಂಗಳೂರಿನಲ್ಲಿಂದು ಕರ್ನಾಟಕ ನ್ಯಾಯಾಂಗ ಅಕಾಡೆಮಿಯ 25ನೇ ವರ್ಷದ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು