Google search engine
ಮನೆUncategorizedಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರನ್ನು ಕೂಡಲೇ ಬಂಧಿಸಿ...

ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರನ್ನು ಕೂಡಲೇ ಬಂಧಿಸಿ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು

ಯಾದಗಿರಿ ನಗರ ಪಿಎಸ್’ಐ ಆದ ಪರಶುರಾಮ್ ಛಲವಾದಿ ಅವರ ಶಂಕಾಸ್ಪದ ಸಾವಿಗೆ ಕಾರಣಿಕರ್ತರಾದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರನ್ನು ಕೂಡಲೇ ಬಂಧಿಸಿ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಜಂಟಿಯಾಗಿ ನಡೆಸಿದ ಪ್ರತಿಭಟನೆಯು ನಗರದ ಜಗತ್ ವೃತ್ತದಿಂದ ಕಾಲ್ನಡಿಗೆಯ ಮುಖಾಂತರವಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಅವರು ಯಾದಗಿರಿ ನಗರ ಠಾಣೆಯ ದಕ್ಷ ಹಾಗೂ ಪ್ರಾಮಾಣಿಕ ಪಿಎಸ್’ಐ ಪರಶುರಾಮ ಅವರು ಸರಕಾರಿ ವಸತಿ ಗೃಹದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಈ ಸಾವಿಗೆ ಅವರ ಕುಟುಂಬದವರ ದೂರಿನ ಪ್ರಕಾರ ಯಾದಗಿರಿ ನಗರ ಠಾಣೆಯಲ್ಲಿ ಪಿ.ಎಸ್.ಐ ಆಗಿ ಮುಂದುವರೆಯಲು ಯಾದಗಿರಿ ಶಾಸಕರಾದ ಚನ್ನಾರೆಡ್ಡಿ ಪಾಟೀಲ ಹಾಗೂ ಅವರ ಮಗನಾಗ ಪಂಪನಗೌಡ ಅವರು 30 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿರುತ್ತಾರೆ ಆದ್ದರಿಂದ ಅವರು ಮನನೊಂದು ಸಾವನ್ನಪ್ಪಿರುತ್ತಾರೆ. ಆದ್ದರಿಂದ ಈ ಘಟನೆ ನಡೆದು ಸುಮಾರು ದಿನಗಳೇ ಕಳೆದರೂ, ಅವರಿಗೆ ನ್ಯಾಯ ಸಿಕ್ಕಿಲ್ಲ ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಮೃತ ಪಿಎಸ್’ಐ ಕುಟುಂಬಕ್ಕೆ 5 ಕೋಟಿ ರೂಪಾಯಿಗಳ ಪರಿಹಾರ ನೀಡಬೇಕು ಹಾಗೆಯೇ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!