ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಯಾವುದೇ ಸಂದರ್ಭದಲ್ಲಿ ಒಂದು ಪಕ್ಷ ಇನ್ನೊಂದು ಪಕ್ಷವನ್ನು ಅಭದ್ರ ಆಗುವ ರೀತಿ ಮಾಡಬಾರದು,
ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೇಸ್ ಪಕ್ಷವನ್ನು ಎದುರಿಸುವಂತಹ ಕೆಲಸ ಮಾಡಬೇಕು ಎಂದು ಬಿಜೆಪಿ ಪಕ್ಷದ ಗ್ರಾಮೀಣ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ನಾಯಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರು ಜೇವರ್ಗಿ ಪುರಸಭೆಯ 13 ಜನ ಸದಸ್ಯರನ್ನು ಜೆಡಿಎಸ್’ಗೆ ಕರೆದುಕೊಂಡು ಹೋಗಿದ್ದಾರೆ. ಸದಸ್ಯರನ್ನು ಹೆದರಿಸಿ, ಬೆದರಿ, ಆಮಿಷವೊಡ್ಡಿ ತಮ್ಮ ಪಕ್ಷಕ್ಕೆ ಕರೆದೊಯ್ಯುವುದಲ್ಲದೇ ಒಂಭತ್ತು ದಿನಗಳ ಕಾಲ ಅವರ ಕುಟುಂಬದವರ ಸಂಪರ್ಕಕ್ಕೆ ಬರದಂತಹ ರೀತಿಯಲ್ಲಿ ನೋಡಿಕೊಳ್ಳುವುದೆಂದರೇ ಏನರ್ಥ?, ಜೆಡಿಎಸ್ ಮುಖಂಡರು ಈ ರೀತಿ ಮಾಡುವ ಮೂಲಕ ಕಾಂಗ್ರೇಸ್ ಪಕ್ಷವನ್ನು ಸಹಕಾರ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು





