ಇಂದು ನಾನು ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದೇವೆ. ಅಲ್ಲಿ ರಾಜ್ಯಪಾಲರಿಗೆ ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿ ಬರುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯಪಾಲರ ನಡೆ ಸರಿಯಲ್ಲ. ಅವರಿಗೆ ಒಳ್ಳೆಯ ಬುದ್ದಿ ಕೊಡಲಿ ಎಂದಷ್ಟೇ ನಾವು ಪ್ರಾರ್ಥಿಸುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ