Google search engine
ಮನೆUncategorizedಸೆಪ್ಟೆಂಬರ್ 13 ಹಾಗೂ 14ರಂದು ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಬೃಹತ್ ಸಮ್ಮೇಳನ

ಸೆಪ್ಟೆಂಬರ್ 13 ಹಾಗೂ 14ರಂದು ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಬೃಹತ್ ಸಮ್ಮೇಳನ

ಸೆಪ್ಟೆಂಬರ್ 13 ಹಾಗೂ 14ರಂದು ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಬೃಹತ್ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ‌.ನಾಗಲಕ್ಷ್ಮಿ ಅವರು ತಿಳಿಸಿದ್ದಾರೆ

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಶಿಶು ಮರಣ, ತಾಯಿ ಮರಣ ತಡೆಯುವುದು ಸೇರಿದಂತೆ ‌ಇತರೇ ಆರೋಗ್ಯ ಸೇವೆಗಳನ್ನು ನೀಡಿರುವ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಕುರಿತು ಸರ್ಕಾರದ ಗಮನ ಸೆಳೆಯಲು ಸೆಪ್ಟೆಂಬರ್ 13 ಹಾಗೂ 14ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಬೃಹತ್ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನಕ್ಕೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಧ್ಯಕ್ಷರಾದ ಕೆ ಸೋಮಶೇಖರ್, ಡಾ. ಸುಧಾ ಕಾಮತ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿ ಜಿ ದೇಸಾಯಿ, ಎಸ್ ಎಮ್ ಶರ್ಮಾ, ಆಶಾ ಕಾರ್ಯಕರ್ತೆಯರಾದ ಶಿವಲಿಂಗಮ್ಮ, ಶಾರದ, ರೂಪಾ ಸೇರಿ ಇತರರು ಹಾಜರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!