ಪಂಚಭೂತಗಳಿಂದ ಪಂಚೇಂದ್ರಿಯ ಮೂಲಕ ಅರಿಶಡ್ವರ್ಗಗಳನ್ನು ನಿಯಂತ್ರಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ತಮ್ಮ ಜೀವನವನ್ನು ಮುಡುಪಾಗಿಟ್ಟು ಸಮಾಜದ ಏಳಿಗೆಗಾಗಿ ದಾರ್ಶನಿಕರು ಶ್ರಮಿಸಿದ್ದರಿಂದಲೇ ದೇಶದಲ್ಲಿ ರಾಮಾಯಣ ಮಹಾಭಾರತ ಕಾವ್ಯಗಳು ಸೃಷ್ಟಿಯಾಗಲು ಸಾಧ್ಯವಾಯಿತು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾವಚ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು





