ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃಧ್ದಿ ಮಂಡಳಿ, ಕಲಬುರಗಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ಬಗ್ಗೆ 30 ದಿನಗಳ ವಿಷಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಲಬುರಗಿ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಕಲ್ಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಅವಿಷ್ಕಾರ ಯೋಜನೆ ಅಡಿಯಲ್ಲಿ ಕಂಪ್ಯೂಟರ್ ಹಾರ್ಡ್ವವೇರ್ ಮತ್ತು ನೆಟವರ್ಕಿಂಗ್ ಹಾಗೂ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ಬಗ್ಗೆ 30 ದಿನಗಳ ವಿಷಯಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತಾನಾಡಿದ ಅಜಯ್ ಸಿಂಗ್ ಅವರು ಉದ್ಯಮಶೀಲತಾಭಿವೃಧ್ದಿ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಂದರೇಶ್ ಬಾಬು, ಧಾರವಾಡ ಕೇಂದ್ರ ಸಿಡಾಕ್ ಕರ್ನಾಟಕ ಉದ್ಯಮಿಶೀಲತ ಅಭಿವೃದ್ಧಿ ಮಂಡಳಿ ನಿರ್ದೇಶಕ ಬಿ ಎಂ ಗೋಟರು,ರಾಯಚೂರು ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ, ಸೇರಿದಂತೆ ಸಿಡಾಕ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಸೈಯದ್ ಅಷ್ಕಕ್ ಅಹ್ಮದ್ ಇದ್ದರು





