ಕರ್ನಾಟಕ ರಾಜ್ಯದ ರಾಜ್ಯಪಾಲರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕುರುಬಗೊಂಡ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗ ಹುಮ್ನಾಬಾದ್ ತಾಲೂಕು ವತಿಯಿಂದ ತಹಶೀಲ್ದಾರ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕುರುಬಗೊಂಡ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗ ಹುಮ್ನಾಬಾದ್ ತಾಲೂಕು ವತಿಯಿಂದ ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು ರಾಜ್ಯಪಾಲರು ಸಂವಿಧಾನದ ಬದ್ಧವಾಗಿ ಕೆಲಸ ಮಾಡದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವ ರಾಜಕೀಯ ಶಡ್ಯಂತ್ರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೂಡಲೇ ಕರ್ನಾಟಕದ ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋಟ್ ಅವರನ್ನು ವಜಾಗೊಳಿಸಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವರಾಜ ಚಿನಕೇರಿ, ಬ್ಯಾಂಕ್ ರೆಡ್ಡಿ, ಅಶೋಕ ಸೊಂಡೆ, ಮಾಣಿಕ ಹಿಪ್ಪರಗಿ,ಪವನ್ ಗೊಂಡ, ಉಮೇಶ್ ಸೇರಿದಂತೆ ಇತರರು ಇದ್ದರು