ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 900 ಕೋಟಿ ರೂ. ಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಇದೆ, ಇದರಲ್ಲಿ ಪ್ರತಿಷ್ಠತ ವ್ಯಕ್ತಿಗಳ ಆಸ್ತಿಯೇ ಹೆಚ್ಚಿದ್ದು, ಸರಿಯಾಗಿ ತೆರಿಗೆ ಕಟ್ಟದೆ ಯಾಮಾರಿಸುತ್ತಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದು, ತೆರಿಗೆ ಕಟ್ಟುವ ವಿಚಾರದಲ್ಲಿ ಬಿಬಿಎಂಪಿಯನ್ನು ಯಾಮಾರಿಸುತ್ತಿದ್ದಾರೆ ಎಂದು ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾತನಾಡಿದರು.