ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ವತಿಯಿಂದ, ಸಮೂಹ ಸಂಪನ್ಮೂಲ ಕೇಂದ್ರ ಜಯನಗರದ ದಕ್ಷಿಣ ವಲಯದಲ್ಲಿನ ಪೂಜಾ ಕಾಲೋನಿಯಲ್ಲಿರುವ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಕಲಬುರಗಿ ನಗರದಲ್ಲಿನ ಪೂಜಾ ಕಾಲೋನಿಯಲ್ಲಿರುವ ಮಾತೋಶ್ರೀ ‘ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್’ನ ಅಡಿಯಲ್ಲಿ ಬರುವ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024 – 25 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀನಿವಾಸ ಹಿಪ್ಪರಗಿ ಅವರ ನೇತೃತ್ವದಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದಂತಹ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿಜಯಕುಮಾರ ಜಮಖಂಡಿ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಡಾ. ಪ್ರಕಾಶ ರಾಠೋಡ, ಜಯನಗರ ಕ್ಲಸ್ಟರ್’ನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ನರಸಿಂಹ ಗೋಠೆ ಸೇರಿದಂತೆ ಹಲವರಿಗೆ ಸನ್ಮಾನಿಸಿ ಸತ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಜಯನಗರ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆಗಳ ಮಕ್ಕಳು ಹಲವು ರೀತಿಯ ನಾಟಕ ಪ್ರದರ್ಶನ ಸೇರಿದಂತೆ ವಿವಿಧ ರೀತಿಯ ನೃತ್ಯಗಳನ್ನು ಪ್ರದರ್ಶನ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಸೇರಿದಂತೆ ಹಲವು ಶಾಲೆಗಳಿಂದ ತೀರ್ಪುಗಾರರಾಗಿ ಆಯ್ಕೆಯಾಗಿ ಬಂದ ಶಿಕ್ಷಕಿಯರು ಭಾಗವಹಿಸಿದ್ದರು