ಕಲಬುರಗಿ ಜಿಲ್ಲಾ ಕಾಂಗ್ರೇಸ್ ಸಮಿತಿ ವತಿಯಿಂದ ನಗರದ ಕೆಪಿಸಿಸಿ ಕಛೇರಿಯಲ್ಲಿ ಸಂಸದ ರಾಧಾಕೃಷ್ಣ ದೊಡ್ಮನಿ ಸೇರಿದಂತೆ ವಿವಿಧ ಕಾಂಗ್ರೇಸ್ ಮುಖಂಡರು ಡಾ. ಸರ್ವಪ್ಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಿದರು
ಕಲಬುರಗಿ ನಗರದ ಹಿಂದಿ ಪ್ರಚಾರ ಸಮಿತಿ ಮುಂಭಾಗದಲ್ಲಿರುವ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ಭಾರತದ ಎರಡನೇ ರಾಷ್ಟ್ರಪತಿಗಳು ಹಾಗೂ ಮೊದಲ ಉಪರಾಷ್ಟ್ರಪತಿಗಳಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ನಂತರ ಎಮ್ ಎಲ್ ಸಿ ಜಗದೇವ ಗುತ್ತೇದಾರ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ನಮ್ಮ ಕಛೇರಿಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುತ್ತಿದ್ದು, ಶಿಕ್ಷಕರನ್ನು ಬ್ರಹ್ಮನನ್ನು ಹೋಲಿಸಿರುವಂತೆ ಈ ದೇಶದ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರ, ಸುಭಾಷ್ ರಾಠೋಡ್ ಸೇರಿದಂತೆ ಹಲವು ಕಾಂಗ್ರೇಸ್ ಕಾಂಗ್ರೇಸ್ ಮುಖಂಡರು ಭಾಗವಹಿಸಿದ್ದರು