ವಕ್ಸ್ ಬೋರ್ಡ್ ತಿದ್ದುಪಡಿ ಮಸೂದೆ ಬೆಂಬಲಿಸಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸಹಿ ಸಂಗ್ರಹ ಆಂದೋಲನಕ್ಕೆ ಮುಂದಾಗಿದ್ದಾರೆ. ಈ ಕುರಿತು ಮಂಗಳವಾರ ಧಾರವಾಡ ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 12 ರಿಂದ ಕರ್ನಾಟಕ ರಾಜ್ಯಾದ್ಯಂತ ಸಹಿ ಸಂಗ್ರಹ ಆಂದೋಲನ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ಧತೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ.