Google search engine
ಮನೆUncategorizedಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ನಾಲ್ವರು ಸಾವು: ಕುಟುಂಬಸ್ಥರಿಗೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಸಾಂತ್ವನ

ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ನಾಲ್ವರು ಸಾವು: ಕುಟುಂಬಸ್ಥರಿಗೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಸಾಂತ್ವನ

ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟ ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ.
ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

ಸಿಡಿಲು ಬಡಿದು
ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ನುಡಿದರು.

ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!