ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಹಿರಿಯ ನಾಗರಿಕ ವೇದಿಕೆಗಳ ಹಾಗೂ ಲಯನ್ಸ್ ಕುಮಾರ ಪಾರ್ಕ್ ಟ್ರಸ್ಟ್ , ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಬೆಂಗಳೂರು ನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಬಾಲ ಮಂದಿರದ ಆವರಣ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೂಸೂರು ರಸ್ತೆ, ಬೆಂಗಳೂರು ಇಲ್ಲಿ ಆಯೋಜಿಸಲಾಗಿದ್ದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಪ್ರಯುಕ್ತ “ ಉಚಿತ ನೇತ್ರ ತಪಾಸಣಾ ಶಿಬಿರ ವನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕರಾದ ಡಾ. ರಾಘವೇಂದ್ರ ಟಿ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಚಲನಚಿತ್ರದ ಕಲಾವಿದರಾದ ಶ್ರೀಮತಿ ಗಿರಿಜಾ ಲೋಕೇಶ್ , ಬೆಂಗಳೂರು ನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸುಮಂಗಲ ಮಾಳಪುರ, ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳಾದ ಕೃಷ್ಣಮೂರ್ತಿ ಕೆ ಹಾಗೂ ವಿವಿಧ ಸಂಘ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು