ಯಾದಗಿರಿಯಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ; 35.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಯಾದಗಿರಿಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಹಾಗೂ ಬಾರ್ ಅಸೋಸಿಯೇಷನ್ ಕಟ್ಟಡವನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಕೆ.ಎಸ್.ಹೇಮಲೇಖಾ, ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಅಶೋಕ್ ಗಿಣಗಿ, ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು. 10 ಎಕರೆ ಜಾಗದಲ್ಲಿ 35.5 ಕೋಟಿ ರೂಪಾಯಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಿಸಲಾಗಿದ್ದು, ಕೆಲಸವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿತ್ತು. ನ್ಯಾಯಾಲಯವು 8 ಸಭಾಂಗಣಗಳನ್ನು ಹೊಂದಿದೆ. ಇದರಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಲಯ ಸಭಾಂಗಣಗಳೂ ಸೇರಿವೆ. 2 ಕೋಟಿ ರೂಪಾಯಿ ವೆಚ್ಚದಲ್ಲಿ ಬಾರ್ ಅಸೋಸಿಯೇಷನ್ ಕಟ್ಟಡ ನಿರ್ಮಿಸಲಾಗಿದ್ದು, ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬಳಿಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು, ಹೊಸ ಕಟ್ಟಡ ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿದ್ದು, ಸುಗಮ ಕಲಾಪಗಳಿಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಕೆ.ಎಸ್.ಹೇಮಲೇಖಾ, ಹೊಸ ಕಟ್ಟಡದ ನಿರ್ಮಾಣದಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು