ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಹಾಗೂ ಆಳಂದ ತಾಲೂಕಿನ ಕಡಗಂಚಿ ಬಳಿ ಇತ್ತೀಚಿನ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಬೆಳೆ ಹಾನಿ ಪ್ರದೇಶ ವೀಕ್ಷಿಸಿದರು ಸಾವಳಗಿ ಕ್ರಾಸ್ ಬಳಿ ಸರ್ವೇ ನಂ.92/1 ರಲ್ಲಿನ ನಾಲ್ಕು ಎಕರೆಯಲ್ಲಿ ಸೋಮಶೇಖರ ಹಣಮಂತರಾವ ಅವರು ಬೆಳೆದ ತೊಗರಿ ಬೆಳೆ ಹಾನಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎನ್.ಚೆಲುವರಾಯಸ್ವಾಮಿ ಅವರು, ಕಳೆದ ಬಾರಿ ಸಹ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಸುಮಾರು 650 ಕೋಟಿ ರೂ. ಪರಿಹಾರ ಘೋಷಿಸಲಾಗಿತ್ತು. ಈ ವರ್ಷ ಸಹ ಮತ್ತೆ ಮಳೆಯಿಂದ ಬೆಳೆ ಹಾನಿಯಾಗಿದ್ದು, ಬೆಳೆ ವಿಮೆ ಪರಿಹಾರದ ಜೊತೆಗೆ ಸರ್ಕಾರದಿಂದ ಪರಿಹಾರ ಬಿಡುಗಡೆ ಕುರಿತು ಸಿ.ಎಂ.ಘೋಷಣೆ ಮಾಡಲಿದ್ದಾರೆ ಎಂದರು ಇದೇ ಸಂದರ್ಭದಲ್ಲಿ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷೆ ಸಿದ್ರಾಮಪ್ಪ ಧಂಗಾಪೂರ ಅವರು ರೈತರ ವಿವಿಧ ಬೇಡಿಕೆಯ ಕುರಿತು ಸಚಿವರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರ ಈಗಾಗಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ರೈತರ ಕಲ್ಯಾಣಕ್ಕಾಗಿ ಬೆಳೆ ಸಾಲ ಮನ್ನಾ ಮಾಡುವ ಆರನೇ ಗ್ಯಾರಂಟಿ ಘೋಷಿಸಬೇಕು ಎಂದು ಮನವಿ ಮಾಡಿದರು
ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಸಾವಳಗಿ ಕ್ರಾಸ್ ಹಾಗೂ ಆಳಂದ ತಾಲೂಕಿನ ಕಡಗಂಚಿ ಬಳಿ ಬೆಳೆ ಹಾನಿ ಪ್ರದೇಶ ವೀಕ್ಷಿಸಿದರು
ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಸಾವಳಗಿ ಕ್ರಾಸ್ ಹಾಗೂ ಆಳಂದ ತಾಲೂಕಿನ ಕಡಗಂಚಿ ಬಳಿ ಬೆಳೆ ಹಾನಿ ಪ್ರದೇಶ ವೀಕ್ಷಿಸಿದರು





