Google search engine
ಮನೆUncategorizedಅ.17 ರಂದು ಬೃಹತ್ ಉದ್ಯೋಗ ಮೇಳ: 15000 ಅಭ್ಯರ್ಥಿ ಹಾಗೂ 221 ಕಂಪನಿ ನೊಂದಣಿ: ಡಾ:...

ಅ.17 ರಂದು ಬೃಹತ್ ಉದ್ಯೋಗ ಮೇಳ: 15000 ಅಭ್ಯರ್ಥಿ ಹಾಗೂ 221 ಕಂಪನಿ ನೊಂದಣಿ: ಡಾ: ಶರಣಪ್ರಕಾಶ್ ಪಾಟೀಲ್

17 ರಂದು ಬೃಹತ್ ಉದ್ಯೋಗ ಮೇಳ: 15000 ಅಭ್ಯರ್ಥಿ ಹಾಗೂ 221 ಕಂಪನಿ ನೊಂದಣಿ: ಡಾ: ಶರಣಪ್ರಕಾಶ್ ಪಾಟೀಲ್

ಅ.17 ರಂದು ಬೃಹತ್ ಉದ್ಯೋಗ ಮೇಳ: 15000 ಅಭ್ಯರ್ಥಿ ಹಾಗೂ 221 ಕಂಪನಿ ನೊಂದಣಿ: ಡಾ: ಶರಣಪ್ರಕಾಶ್ ಪಾಟೀಲ್ ಮೈಸೂರು ಅಕ್ಟೋಬರ್ 14(ಕರ್ನಾಟಕ ವಾರ್ತೆ): ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈಗಾಗಲೇ 15000 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ: ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದರು ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜ್ಯಾದ್ಯಾಂತ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು https://udyogamela.ksdckarnataka.com ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೊಂದಾಯಿಸಿಕೊಂಡಿದ್ದು, ಸ್ಥಳೀಯ ಕಂಪನಿಗಳು ಸಹ ಹೆಸರು ನೊಂದಾಯಿಸಿಕೊಳ್ಳಲಿದೆ. ಉದ್ಯೋಗದಾತರು ಸುಮಾರು 45000 ಉದ್ಯೋಗ ಖಾಲಿ ಇರುವುದಾಗಿ ಮಾಹಿತಿ ನೀಡಿದ್ದು, ಅಭ್ಯರ್ಥಿಗಳ ಕೌಶಲ್ಯಗಳ ಮೇಲೆ ಕಂಪನಿಗಳು ಆಯ್ಕೆ ಮಾಡಿಕೊಳ್ಳಲಿದೆ. ಹೆಸರು ನೊಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರವನ್ನು ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿಯನ್ನು ನೀಡಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಅವರು ಸಹ ಉದ್ಯೋಗ ಪಡೆದುಕೊಳ್ಳುವುದು ಸುಲಭವಾಗುತ್ತದೆ ಎಂದರು ಯುವನಿಧಿ ಯೋಜನೆಯಡಿ ನೊಂದಣಿಯಾಗಿರುವ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಬಹಳಷ್ಟು ಮಂದಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಹೆಸರು ನೊಂದಾಯಿಸಿಕೊಂಡರೆ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ನಿರುದ್ಯೋಗ ಭತ್ಯ ನಿಂತುಹೋಗುತ್ತದೆ ಎಂಬ ತಪ್ಪು ಕಲ್ಪನೆಯಿದೆ. ಯುವನಿಧಿ ಯೋಜನೆಯಡಿ ತಿಳಿಸಿರುವಂತೆ 2 ವರ್ಷ ಅಥವಾ ಕೆಲಸ ಸಿಗುವವರೆಗೆ ಯಾವುದು ಮೊದಲು ಅಲ್ಲಿಯವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಯುವನಿಧಿ ಪ್ಲಸ್ ಯೋಜನಯಡಿ ನೀಡಲಾಗುವ ಕೌಶಲ್ಯ ತರಬೇತಿಗೆ ಹೆಚ್ಚು ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಳ್ಳಿ ಎಂದರು ಈ ಹಿಂದೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದುಕೊಂಡಿದ್ದಾರೆ ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿರುತ್ತದೆ. ಉದ್ಯೋಗ ಮೇಳದಲ್ಲಿ ಕನಿಷ್ಠ ಹಾಗೂ ಗರಿಷ್ಠ ವಿದ್ಯಾರ್ಹತೆ ಹೊಂದಿರುವವರಿಗೂ ಉದ್ಯೋಗಾವಕಾಶವಿದೆ ಎಂದರು ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ 3 ಲಕ್ಷ ಹಾಗೂ ಮೈಸೂರು ವಿಭಾಗದಲ್ಲಿ 43500 ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದು, ಅವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲಾಗುತ್ತಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವುದರಿಂದ ಪರೋಕ್ಷವಾಗಿ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ನೇರ ಸಂಪರ್ಕ ಸಾಧಿಸಬಹುದು. ಯಾವ ತಂತ್ರಜ್ಞಾನ, ಕೌಶಲ್ಯಗಳಿಗೆ ಹೆಚ್ಚು ಬೇಡಿಕೆ ಇದೆ ಎಂಬುದನ್ನು ತಿಳಿದುಕೊಂಡು, ಕೌಶಲ್ಯಗಳನ್ನು ಬೆಳೆಸಿಕೊಳ್ಳಬಹುದು ಎಂದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!