Home Uncategorized ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ವ್ಯಕ್ತಿಯ ಬಂಧನ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ವ್ಯಕ್ತಿಯ ಬಂಧನ

0
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ವ್ಯಕ್ತಿಯ ಬಂಧನ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ವ್ಯಕ್ತಿಯ ಬಂಧನ ಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಕಲಬುರಗಿ ಹಾಗೂ ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್ನಲ್ಲಿ ಗುರುವಾರ ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ದಾನಪ್ಪ ನರೋಣೆ ಅಲಿಯಾಸ್ ದಾನೇಶ್ ಬಂಧಿತ ಆರೋಪಿ. ಆರೋಪಿಯನ್ನು ಲಾತೂರ್ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದುಕೊಳ್ಳಲಾಗುವುದು. ಆರೋಪಿ ಚಾಕೊಲೇಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದನು. ಮೊಬೈಲ್ ಲೊಕೇಶನ್ ಆಧರಿಸಿ ಆರೋಪಿಯಿದ್ದ ಸ್ಥಳವನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ

LEAVE A REPLY

Please enter your comment!
Please enter your name here

error: Content is protected !!