ಕರ್ತವ್ಯ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಕಲ್ಬುರ್ಗಿಯಲ್ಲಿಂದು ಪೋಲಿಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು… ಕಲಬುರ್ಗಿ ನಗರ ಹಾಗೂ ಕಲ್ಬುರ್ಗಿ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿ.ಎ.ಆರ್ ಮೈದಾನದಲ್ಲಿ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್ ಡಿ ಅಧ್ಯಕ್ಷತೆಯಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಿಂದ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ನಂತರ ಕವಯತು ತಂಡದಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿ, ಎರಡು ನಿಮಿಷ ಮೌನಚರಣೆ ನೆರವೇರಿಸಿ ಹುತಾತ್ಮ ಪೊಲೀಸರನ್ನು ನೆನೆಯಲಾಯಿತು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಪೊಲೀಸ್ ಮಹಾನಿರೀಕ್ಷಕರು ಈಶಾನ್ಯ ವಲಯ ಶಾಂತನು ಸಿನ್ಹಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ವೇಳೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ ಹತಾತ್ಮ 190 ಪೊಲೀಸರನ್ನು ಸ್ಮರಿಸಿದರು
ಕರ್ತವ್ಯ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಕಲ್ಬುರ್ಗಿಯಲ್ಲಿಂದು ಪೋಲಿಸ್ ಹುತಾತ್ಮರ ದಿನಾಚರಣೆ
ಕರ್ತವ್ಯ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಕಲ್ಬುರ್ಗಿಯಲ್ಲಿಂದು ಪೋಲಿಸ್ ಹುತಾತ್ಮರ ದಿನಾಚರಣೆ





