Home Uncategorized ಗುಂಡ್ಲುಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ಪ್ರತಿಕೃತಿ ದಹಿಸಿ ಆಕ್ರೋಶ

ಗುಂಡ್ಲುಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ಪ್ರತಿಕೃತಿ ದಹಿಸಿ ಆಕ್ರೋಶ

0
ಗುಂಡ್ಲುಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ಪ್ರತಿಕೃತಿ ದಹಿಸಿ ಆಕ್ರೋಶ

ಗುಂಡ್ಲುಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ಪ್ರತಿಕೃತಿ ದಹಿಸಿ ಆಕ್ರೋಶ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ಬಳಸಿದ ಆಕ್ಷೇಪಾರ್ಹ ಪದಗಳನ್ನು ಖಂಡಿಸಿ, ನಾಯಕ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದಿಂದ ಸಾರಿಗೆ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿ, ಮಾನವ ಸರಪಳಿ ನಿರ್ಮಿಸಿ, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ತಡೆದು, ರಮೇಶ್ ಕತ್ತಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಮತ್ತು ಅವರ ಮಾತುಗಳು ಸಂಘರ್ಷಕ್ಕೆ ಪ್ರಚೋದನೆ ನೀಡಲಿವೆ ಎಂದು ಪ್ರತಿಭಟನಾಕಾರರು ವಾಗ್ದಾಳಿ ನಡೆಸಿದರು

LEAVE A REPLY

Please enter your comment!
Please enter your name here

error: Content is protected !!