ಬೆಂಗಳೂರು: ದಿವ್ಯಾ ಸುರೇಶ್ ಹಿಟ್ ಆ್ಯಂಡ್ ರನ್ ಡಿಸಿಪಿ ಹೇಳಿದ್ದೇನು?
ಮಾಜಿ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ಅವರ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ಅನೂಪ್ ಪ್ರತಿಕ್ರಿಯೆ ನೀಡಿದ್ದಾರೆ. ಅಕ್ಟೋಬರ್ 4 ರಂದು ಬ್ಯಾಟರಾಯನಪುರ ಬಳಿ ಎಂಎಂ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅಕ್ಟೋಬರ್ 7 ರಂದು ಕಿರಣ್ ಎಂಬವರು ದೂರು ದಾಖಲಿಸಿದ್ದಾರೆ. ತನಿಖೆಯಲ್ಲಿ ದಿವ್ಯಾ ಅವರ ಕಾರಿನಿಂದ ಅಪಘಾತವಾಗಿರುವುದು ತಿಳಿದುಬಂದಿದೆ. ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಸೀಜ್ ಮಾಡಲಾಗಿದ್ದು, ಅಪಘಾತಕ್ಕೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ





