ಕಲಬುರ್ಗಿ ಜಿಲ್ಲಾ ಪಂಚಾಯತ್ ಆವರಣದಲ್ಲೂ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಣೆ…. ಅಂಕರ್: ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಲಬುರ್ಗಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕೂಡಾ ರಾಷ್ಟ್ರ ಧ್ವಜಾರೋಹಣ ನೆರವೇಸಲಾಯಿತು. . . . . . ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದಂತ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವರ್ ಸಿಂಗ್ ಮೀನಾ ಅವರು ಜಿಲ್ಲಾ ಪಂಚಾಯತ್ ಸೇರಿದಂತೆ ಜಿಲ್ಲೆಯ 260 ಗ್ರಾಮ ಪಂಚಾಯಿತಿ ಹಾಗೂ 11 ತಾಲೂಕ ಪಂಚಾಯತಿಗಳಲ್ಲಿ ಕೂಡ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಕಾಯಕ ಗ್ರಾಮ ಯೋಜನೆ ಮೂಲಕ ಗ್ರಾಮೀಣ ಭಾಗಗಳ ಅಭಿವೃದ್ಧಿ ಕಾರ್ಯ ಇಂದಿನಿಂದ ಅನುಷ್ಠಾನಗೊಳ್ಳಲಿದೆ ಅಂತ ತಿಳಿಸಿದರು