Google search engine
ಮನೆUncategorizedಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಕರವೇ ಕಾರ್ಯಕರ್ತರಿಂದ ರಸ್ತೆ ತಡೆದು ಅರೆಬೆತ್ತಲೆ ಪ್ರತಿಭಟನೆ...

ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಕರವೇ ಕಾರ್ಯಕರ್ತರಿಂದ ರಸ್ತೆ ತಡೆದು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು

ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕೆಂದು ಕರವೇ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆ

ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಕರವೇ ಕಾರ್ಯಕರ್ತರಿಂದ ರಸ್ತೆ ತಡೆದು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು ಸೇಡಂ ಅತಿವೃಷ್ಟಿಯಿಂದ ಹಾನಿಗೊಳಗಾದ ಹೆಸರು, ಉದ್ದು,ತೊಗರಿ,ನಿರಂತರ ಸುರಿದ ಮಳೆಯಿಂದ ರೈತರ ಹೊಲಗಳಲ್ಲಿ ನೀರು ನಿಂತು ಸಂಪೂರ್ಣ ಬೆಳೆ ಹಾನಿಯಾಗಿವೆ ಕೂಡಲೇ ರೈತರಿಗೆ ಪರಹಾರ ನೀಡಬೇಕೆಂದು ಮುಧೋಳ ಕೋಲ್ಕುಂದಾ ಕ್ರಾಸ್ ರಸ್ತೆ ತಡೆದು ಕರವೇ ಕಾರ್ಯಕರ್ತರು ಅರೆ ಬೆತ್ತಲೆ ಪ್ರತಿಭಟನೆ ಮಾಡಿದರು. ಇದೇ ವೇಳೆ ಕರವೇ ತಾಲೂಕಾ ಅದ್ಯಕ್ಷ ಡಾ ರಾಮಚಂದ್ರ ಗುತ್ತೇದಾರ ರಸ್ತೆ ಮೇಲೆ ಉರುಳು ಸೇವೆ ಮಾಡಿ ಮಾತನಾಡಿ ಅತಿ ಶೀಘ್ರದಲ್ಲಿ ರೈತರ ಖಾತೆಗೆ ಹಣ ಜಮೆ ಮಾಡಬೇಕು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ರೈತರು ರಾಷ್ಟಿಕೃತ ಬ್ಯಾಂಕಗಳಲ್ಲಿ ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಾಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು.ರೈತರು ಭೂಮಿ ತಾಯಿಯನ್ನು ನಂಬಿ ಜೀವನ ಮಾಡುತ್ತಿದ್ದಾರೆ ಈ ಬಾರಿ ಬಡ ರೈತರು ಶ್ರೀಮಂತರ ಹೊಲಗಳನ್ನು ವರ್ಷಕ್ಕೆ ಒಂದು ಎಕರೆಗೆ 30,000 ಸಾವಿರ ರೂಪಾಯಿಗಳಂತೆ ಕಡಾವು ಹಾಕಿಕೊಂಡು ಬಿತ್ತನೆ ಮಾಡಿದ್ದಾರೆ ಸಂಪೂರ್ಣ ಬೆಳೆ ಹಾನಿಯಾಗಿವೆ ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಅಧಿಕಾರಿಗಳು ಸಮೀಕ್ಷೆ ಮಾಡಿಕೊಂಡು ಹೋಗಿದ್ಧಾರೆ ಆದರೆ ಇಲ್ಲಿಯವರೆಗೂ ಕೇಂದ್ರ ಸರಕಾರದಿಂದ ,ರಾಜ್ಯ ಸರಕಾರದಿಂದ ರೈತರ ಖಾತೆಗೆ ಪರಿಹಾರ ಹಣ ಜಮೆ ಆಗಿರುವದಿಲ್ಲ ರೈತರು ತುಂಬಾ ಕಷ್ಟದಲ್ಲಿದ್ದಾರೆ ಕೂಡಲೇ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಬೇಕೆಂದು ತಹಶಿಲ್ದಾರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು . ಸುಮಾರು ಎರಡು ಗಂಟೆಗಳ ಕಾಲ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಗ್ರಾಮದ ರೈತರು ಇದ್ದರು ಶರಣಪ್ಪ ಎಳ್ಳಿ ssvtv news ಸೇಡಂ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!