ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ: 500 ವರ್ಷಗಳ ಕನಸು ನನಸು ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಪಂಚಮಿ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀರಾಮ ಮಂದಿರದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಅಳವಡಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಉಪಸ್ಥಿತರಿದ್ದರು. ಧ್ವಜಾರೋಹಣಕ್ಕೂ ಮೊದಲು ಪ್ರಧಾನಿಯವರು ವಿವಿಧ ಮಂದಿರಗಳಿಗೆ ಭೇಟಿ ನೀಡಿ, ರಾಮ ದರ್ಬಾರ್ ಮತ್ತು ರಾಮ ಲಲ್ಲಾ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿದರು