ಜಿಲ್ಲಾ ಯೋಜನಾ ವರದಿಯನ್ನು ಡಿ.15 ರೊಳಗೆ ಸಿದ್ಧಪಡಿಸಿ: ಬಿ.ಆರ್.ಪಾಟೀಲ್ ಮೈಸೂರು,ನ.27(ಕರ್ನಾಟಕ ಜಿಲ್ಲಾ ಯೋಜನಾ ವರದಿಗಳನ್ನು ಆಯವ್ಯಯ ಸಿದ್ಧಪಡಿಸುವ ಮೊದಲು ಸಮಿತಿಗೆ ಸಲ್ಲಿಸಬೇಕು ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳು ವರದಿಯನ್ನು ಡಿಸೆಂಬರ್ 15 ರೊಳಗೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ. ಆರ್ ಪಾಟೀಲ್ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೈಸೂರು ವಿಭಾಗದ 8 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕೇಂದ್ರೀಕರಣ ವ್ಯವಸ್ಥೆಯನ್ನು ಸೈದ್ಧಾಂತಿಕವಾಗಿ ನಾವು ಒಪ್ಪಿಕೊಂಡಿದ್ದರು, ಜಿಲ್ಲಾ ಯೋಜನಾ ವರದಿ ತಯಾರಿಕೆ ಸಮಿತಿ ಸಭೆಗಳು ನಿಗದಿತವಾಗಿ ನಡೆಯಬೇಕು. ವರದಿಯಲ್ಲಿ ಸುಸ್ಥಿರ ಅಭಿವೃದ್ಧಿ, ಜಿ.ಡಿ.ಪಿ, ಮಾನವ ಅಭಿವೃದ್ಧಿ ಸೂಚ್ಯಂಕ ಕ್ಕೆ ಆದ್ಯತೆ ನೀಡಬೇಕು ಎಂದರು. ಜಿಲ್ಲಾ ಮಟ್ಟದಲ್ಲಿ ಯೋಜನೆ ತಯಾರಿಸುವಾಗ ಕೂಲಂಕುಷವಾಗಿ ಪರಿಶೀಲಿಸಿ, ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಯಾವುದೇ ಯೋಜನೆಗಳು ಒವರ್ ಲ್ಯಾಪ್ ಆಗದಂತೆ ನೋಡಿಕೊಳ್ಳಿ ಎಂದರು. ಮಾನವ ಅಭಿವೃದ್ಧಿ ಸೂಚ್ಯಂಕ ಹೆಚ್ಚಳ ಮಾಡಲು ಹಾಗೂ ಲಭ್ಯವಿರುವ ಅನುದಾನದ ಆಧಾರದ ಮೇಲೆ, ಯೋಜನೆ ರೂಪಿಸಿ ಅನುಷ್ಠಾನದ ನಂತರ ಉಂಟಾಗುವ ಉತ್ತಮ ಬೆಳವಣಿಗೆಯ ಬಗ್ಗೆ ಅರ್ಥ ಮಾಡಿಕೊಂಡು ಯೋಜನೆ ರೂಪಿಸಬೇಕು ಎಂದರು. ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ಮಾತನಾಡಿ ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಆಯಾ ತಾಲ್ಲೂಕು ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಯೋಜನಾ ಸಮಿತಿ ಸಭೆಯನ್ನು ನವೆಂಬರ್ 4 ರಿಂದ 15 ರವರೆಗೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ವರದಿ ನೀಡಲಾಗುವುದು ಎಂದರು. ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಸುಸ್ಥಿರ ಅಭಿವೃದ್ಧಿ ಯಲ್ಲಿ ಮುಖ್ಯವಾಗಿ ಶಿಕ್ಷಣ, ಕೃಷಿ, ಪೌಷ್ಟಿಕ ಆಹಾರ ಸೇರಿದಂತೆ ಹಲವಾರು ವಿಷಯವನ್ನು ಮುಖ್ಯವಾಗಿ ಇಟ್ಟಿಕೊಂಡು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು. ಮಾನವ ಯೋಜನೆ ಸಂಯೋಜನೆಯ ಹಿರಿಯ ನಿರ್ದೇಶಕರಾದ ಬಸವರಾಜು ಎಸ್. ಅವರು ಮಾನವ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿಯನ್ನು ಹೇಗೆ ಸಾಧಿಸಬೇಕು, ಯಾವ ಯಾವ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸಿದೆ. ಯಾವ ಕ್ಷೇತ್ರ ಹಿಂದೆ ಉಳಿದೆ. ಹೇಗೆ ಅಭಿವೃದ್ಧಿ ಸಾಧಿಸಬೇಕು. ಯೋಜನೆಗಳನ್ನು ಯಾವ ರೀತಿಯಲ್ಲಿ ಅಳವಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂಬುದರ ಬಗ್ಗೆ ವಿಷಯ ಮಂಡನೆ ಮಾಡಿದರು. ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ರಮಣ್ ದೀಪ್ ಚೌದರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಗಳೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ಜಿಲ್ಲಾ ಯೋಜನಾ ವರದಿಯನ್ನು ಡಿ.15 ರೊಳಗೆ ಸಿದ್ಧಪಡಿಸಿ: ಬಿ.ಆರ್.ಪಾಟೀಲ್
ಜಿಲ್ಲಾ ಯೋಜನಾ ವರದಿಯನ್ನು ಡಿ.15 ರೊಳಗೆ ಸಿದ್ಧಪಡಿಸಿ: ಬಿ.ಆರ್.ಪಾಟೀಲ್





