Home Uncategorized ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ

0
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್; ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಸಿಐಡಿ ಮತ್ತು ಸಂತ್ರಸ್ತೆಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಮೊರೆ ಹೋಗಿದ್ದರು. ರಾಜಕೀಯ ದ್ವೇಷದ ಆರೋಪ ಮುಂದಿಟ್ಟು ಅವರ ಪರ ವಕೀಲರು ವಾದ ಮಂಡಿಸಿದ್ದರು ಪೋಕ್ಸೋ ಕೇಸ್ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ನಿರಾಕಾರಿಸಿತ್ತು. ಆ ಬೆನ್ನಲ್ಲೇ ಬಿಎಸ್ವೈ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ವಾದಿಸಿದ ಹಿರಿಯ ವಕೀಲರಾದ ಸಿಧಾರ್ಥ ಲೂಥ್ರಾ ಮತ್ತು ಸಿಧಾರ್ಥ ದಾವೆ ಅವರು, ಹೈಕೋರ್ಟ್ನ ಫೆ.7, 2025ರ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ ಯಡಿಯೂರಪ್ಪ ಅವರ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ ಅವರು 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿ. ರಾಜಕೀಯ ದ್ವೇಷದಿಂದ ನರಳುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ ಈ ವೇಳೆ, ಹೈಕೋರ್ಟ್ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪೀಠ ಪ್ರತಿವಾದಿಗಳನ್ನು ಪ್ರಶ್ನಿಸಿದೆ

LEAVE A REPLY

Please enter your comment!
Please enter your name here

error: Content is protected !!