Google search engine
ಮನೆUncategorizedಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ

ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ

ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ

ಕಲಬುರಗಿಯ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವವನ್ನು ಕಲಬುರಗಿ ಮಹಾನಗರದ ಶರಣಬಸವೇಶ್ವರ ಪುಣ್ಯಕ್ಷೇತ್ರದ ದೇವಾಲಯದ ಆವರಣದಲ್ಲಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಿತು ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗು ಒಂಭತ್ತನೆ ಪೀಠಧಿಪತಿಗಳು ಚಿರಂಜೀವಿ ಅಪ್ಪಾ ಅವರು ದೀಪ ಬೆಳಗಿಸುವದರ ಮೂಲಕ ಘಟಿಕೋತ್ಸವಕ್ಕೆ ಚಾಲನೆ ನೀಡಿದ್ರು ನಂತ್ರ ಉದ್ಘಾಟನೆಗೈದ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯ್ತು ನಂತರ ಮೂವರು ಗಣ್ಯರಿಗೆ ಪೂಜ್ಯ ಶ್ರೀ ಗುರುಪಾದಲಿಂಗ ಮಹಾ್ಸವಾಮಿಗಳು ಮುತ್ಯಾನ ಬಬಲಾದ ಶಶೀಲ್ ಜಿ ನಮೋಶಿ ,ಹಾಗುಹಜರತ್ ಹಫೀಜ್ ಸೈಯದ್ ಮೊಹಮ್ಮದ ಅಲಿ ಬಾಬಾ ಅಲ್ ಹುಸೈನಿ ಸಜ್ಜಾದೇ ನಶೀನ್ ಖ್ವಾಜಾ ಬಂದಾನವಾದ ದರ್ಗಾ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಹಿರಿಯ ಕೃಷಿ ವಿಜ್ಞಾನಿ ಪ್ರೊ. ಪಿ. ಎಲ್. ಪಾಟೀಲ್ ಅವರು ಘಟಿಕೋತ್ಸವ ಭಾಷಣ ಮಾಡಿ. ಪದವಿಪೂರ್ವ, ಸ್ನಾತಕೋತ್ತರ, ಪಿಎಚ್ಡಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ ಪದವಿ ಪಡೆದವರಿಗೆ ಚಿನ್ನದ ಪದಕಗಳು ಹಾಗೂ ಪ್ರಮಾಣಪತ್ರಗಳನ್ನು ಪ್ರದಾನ ಮಾಡಿದ್ರು ಬೆಂಗಳೂರಿನ ಎಸ್ಎಪಿ ಇಂಡಿಯಾದಲ್ಲಿ ಉನ್ನತ ಶಿಕ್ಷಣ ಕೌಶಲ್ಯ ವಿಭಾಗದ ಮುಖ್ಯಸ್ಥ ಶ್ರೀ ಫಿಲಿಪ್ ಸ್ಯಾಮ್ಯುಯೆಲ್ ಬಾಬು ಅವರು ಗೌರವ ಅಥಿತಿಗಳಾಗಿ ಪಾಲ್ಗೊಂಡಿದ್ರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಅವರು ಘಟಿಕೋತ್ಸವದಲ್ಲಿ ಸ್ವಾಗತ ಭಾಷಣ ಮಾಡಿದ್ರು ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್, ಕುಲಸಚಿವ ಮೌಲ್ಯಮಾಪನ ಡಾ. ಎಸ್. ಎಚ್. ಹೊನ್ನಳ್ಳಿ ಘಟಿಕೋತ್ಸವದ ಪ್ರಕ್ರಿಯೆಗಳನ್ನು ನಡೆಸಿಕೊಟ್ರು . ಪ್ರೊ. ಅನಿಲಕುಮಾರ ಬಿಡವೆ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಅವರು ಹಾಜರಿದ್ರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!