ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ? : ಡಿ ಕೆ ಶಿವಕುಮಾರ್ ರಿಯಾಕ್ಷನ್ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪ್ರಧಾನಿಯಾಗಿ ಮಾಡೇ ಮಾಡ್ತೀವಿ, ಇಂದಿರಾಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಎಂಬುದನ್ನು ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ. ಇನ್ನೂ ಪ್ರಿಯಾಂಕಾ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂಬ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ರಾಜಕೀಯವಾಗಿ ಉಜ್ವಲ ಭವಿಷ್ಯವಿದ್ದು, ಆಕೆ ಪ್ರಧಾನಮಂತ್ರಿಯಾಗಬೇಕು ಎಂಬ ಚರ್ಚೆ ಕುರಿತು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ನನಗೆ ಈ ವಿಚಾರಗಳ ಬಗ್ಗೆ ಮಾಹಿತಿ ಇಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷವನ್ನು ಮುನ್ನಡೆಸುತ್ತಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಪಾಲಿಸುತ್ತೇವೆ





