ಬಾಗಲಕೋಟೆಯ ಇಳಕಲ್ ನಗರ ಗಾಂಧಿ ಚೌಕ್ ಬಳಿಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಗುಂಪು ಗುಂಪಾಗಿ ನಾಯಿಗಳು ದಾಳಿ ನಡೆಸಿದ್ದು, ಆತನಿಗೆ ಕಚ್ಚಿವೆ ಎಂದು ಹೇಳಲಾಗುತ್ತಿದೆ. ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ವ್ಯಕ್ತಿ ಸ್ಥಳದಿಂದ ಓಡಿ ಹೋಗಿದ್ದು ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ