ಮತದಾನ ಪ್ರತಿಯೊಬ್ಬರ ಹಕ್ಕು. ಅದನ್ನು ಯಾರೂ ಬಿಟ್ಟುಕೊಡುವಂತಿಲ್ಲ. ಮತದಾನ ಮಾಡಿದವರಿಗೆ ಮಾತ್ರ ತಮ್ಮ ಹಕ್ಕನ್ನು ಕೇಳಿ ಪಡೆಯುವ ಅಧಿಕಾರ ಬರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕಿವಿಮಾತು ಹೇಳಿದ್ದಾರೆ.
ಜಿಲ್ಲೆಯ ಹಲವು ಕಡೆಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟು ಕೆಲವು ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಅಭಿವೃದ್ಧಿ ಕೆಲಸ ಬೇರೆ, ಮತದಾನ ಹಕ್ಕು ಬೇರೆ. ಮತದಾನ ಬಹಿಷ್ಕಾರ ಸಲ್ಲದು ಎಂದು ಹೇಳಿದ್ದಾರೆ.