ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾತನಾಡಿ, ಕರ್ನಾಟಕದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಮಾತ್ರ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಜೆಡಿಎನ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಹಾಸನದಲ್ಲಿ ಜನವರಿ 23ರಂದು, ಬೆಂಗಳೂರಿನಲ್ಲಿ ಜನವರಿ 18ರಂದು ಪಕ್ಷದ ಸಭೆಗಳು ನಡೆಯಲಿವೆ ಮುಂದಿನ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಮುಂದುವರಿಯುವುದಾಗಿ ತಿಳಿಸಿದರು ವಿಧಾನ ಪರಿಷತ್ 4 ಸ್ಥಾನಗಳ ಹಂಚಿಕೆ ಬಗ್ಗೆಯೂ ಪ್ರಾಥಮಿಕ ಚರ್ಚೆ ನಡೆದಿದೆ ಎಂದು ಅವರು ಹೇಳಿದರು





