ಲೋಕಾಯುಕ್ತ ನ್ಯಾಯಾಧೀಶ ಪಾಟೀಲ ಬುದ್ದಿ ಮಾತು..! ಲೋಕಾಯುಕ್ತ ನ್ಯಾಯಾಧೀಶರಾದ ಬಿ.ಎಸ್.ಪಾಟೀಲ ಅವರು ಇಂದು ಯಾದಗಿರಿ ಜಿಲ್ಲಾಡಳಿತ ಭವನದಲ್ಲಿರುವ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನಿಸಿದರು.ಸಮಾಜ ಕಲ್ಯಾಣ ಇಲಾಖೆ ,ಕೃಷಿ ಇಲಾಖೆ ಸೇರಿ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.ವಸತಿ ನಿಲಯದಲ್ಲಿ ಅವ್ಯವಸ್ಥೆ ಸರಿಪಡಿಸುವಂತೆ ಸೂಚಿಸಿದ್ದಾರೆ. ನಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದರು.ಪ್ರತಿಯೊಬ್ಬರೂ ತಮ್ಮ ಕಾಯಕದಲ್ಲಿ ಶ್ರೇಷ್ಠತೆ ಕಾಪಾಡಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡುವ ಕಾರ್ಯ ಮಾಡಬೇಕಿದೆ ಪ್ರತಿಯೊಬ್ಬರೂ ಉತ್ತಮ ಕಾಯಕ ಮಾಡಬೇಕೆಂದು ಅಧಿಕಾರಿಗಳಿಗೆ ಬುದ್ದಿ ಮಾತು ಹೇಳಿದ್ದಾರೆ





