Google search engine
ಮನೆUncategorizedZWEEC ತಂಡವನ್ನು ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು

ZWEEC ತಂಡವನ್ನು ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು

ಕುಡಿಯುವ ನೀರಿನ ಮಾಲಿನ್ಯವನ್ನು ಸರಬರಾಜಿಗೂ ಮುನ್ನ ಪತ್ತೆಹಚ್ಚಲು, ಜೈವಿಕ ಮೇಲ್ವಿಚಾರಣೆಯ ಮೇಲೆ ಕೇಂದ್ರೀಕರಿಸಿದ ಸುಧಾರಿತ ನೀರಿನ ತಂತ್ರಜ್ಞಾನ ಪರಿಹಾರಗಳ ಮೇಲೆ ಕೆಲಸ ಮಾಡುವ ಸಿಂಗಾಪುರ ಮೂಲದ (ಜ್ವೆಕ್) ZWEEC ತಂಡವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು. ನೀರಿನ ಸುರಕ್ಷತೆ ಮತ್ತು ಪರಿಸರ ಮೇಲ್ವಿಚಾರಣೆಯನ್ನು ಬಲಪಡಿಸಲು ಸ್ವಯಂಚಾಲಿತ ಮತ್ತು ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಬಳಸುವುದರ ಮೇಲೆ ಈ ವಿಧಾನವು ಕೇಂದ್ರೀಕರಿಸುತ್ತದೆ ಕರ್ನಾಟಕದ ಗ್ರಾಮೀಣ ಕುಡಿಯುವ ನೀರಿನ ವ್ಯವಸ್ಥೆಗೆ ಸಿಂಗಾಪುರ ತಂತ್ರಜ್ಞಾನ ಹೇಗೆ ಪ್ರಸ್ತುತವಾಗಬಹುದು ಎಂಬುದನ್ನು ಸಚಿವರು ದರಲ್ಲದೆ, ಸಂಸ್ಥೆ ವಿವರಿಸಿದ ಪರಿಹಾರಗಳನ್ನು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿವರವಾಗಿ ಮೌಲ್ಯಮಾಪನ ಮಾಡಲಾಗುವುದು ಮತ್ತು ಈ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲು ಮಾದರಿ ಯೋಜನೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಲ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ನೀರು ಸರಬರಾಜು ಮಾಡಲು ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!