ಕಲಬುರಗಿ: ಜನೆವರಿ ೦೭ (ಕರ್ನಾಟಕ ವಾರ್ತೆ ) ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿರುವ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಮತ್ತಷ್ಟು ಹೆಚ್ಚಳವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧುವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಎಲ್ಕೆ.ಜಿ. ಯುಕೆಜಿ ತರಗತಿ ಪ್ರಾರಂಭಿಸಲಾಗಿದೆ ಮತ್ತು ದ್ವಿ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಇದರಿಂದಾಗಿ ದಾಖಲಾತಿ ಹೆಚ್ಚಳವಾಗುತ್ತಿದೆ ಎಂದು ಹೇಳಿದರು. ೨೦೨೫-೨೬ ನೇ ಸಾಲಿನಲ್ಲಿ ಕೆಪಿಎಸ್ ಶಾಲೆಗಳು ಎಲ್ಕೆಜಿ ಯಿಂದ ೧೨ ನೇ ತರಗತಿವರೆಗೆ ಒಂದೇ ಸೂರಿನಡಿಯಲ್ಲಿ ಗುಣಾತ್ಮಕ ಶಿಕ್ಷಣ ಲಭಿಸಲು ಕೆ.ಪಿಎಸ್ ಶಾಲೆಗಳನ್ನು ಪ್ರಾರಂಭಿಸಿದೆ ಕಲಬುರಗಿಯಲ್ಲಿ ಈ ಹಿಂದೆ ೧೪ ಕೆ.ಪಿಎಸ್. ಶಾಲೆಗಳಿದ್ದು, ಈಗ ಕೆ.ಕೆ.ಆರ್.ಡಿ.ಬಿ. ಯೋಜನೆಗಳನ್ನು ೫೩ ಕೆ.ಪಿಎಸ್. ಶಾಲೆಗಳು ಮಂಜೂರು ಮಾಡಲಾಗಿದೆ ಎಂದರು. ೨೦೨೫-೨೬ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಳಕ್ಕೆ ಜಿಲ್ಲೆಯಲ್ಲಿ ಸಾಕಷ್ಟು ಕ್ರಮಗಳನ್ನು ಅನುಸರಿಸಲಾಗುತ್ತಿದೆ ಈ ನಿಟ್ಟಿನಲ್ಲಿ ಮಿಷನ್-೪೦+ ನಿಂದಾಗಿ ಈ ವರ್ಷ ಫಲಿತಾಂಶ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಹೇಳಿದರು ರಾಜ್ಯದಲ್ಲಿ ಶಿಕ್ಷಣ ಸಲುವಾಗಿ ೪೬೦೦೦ ಕೋಟಿ ಅನುದಾನ ಖರ್ಚು ಮಾಡಲಾಗುತ್ತಿದ್ದು, ಎಸ್.ಎಸ್.ಎಲ್. ಪರೀಕ್ಷೆಯಲ್ಲಿ ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶ ಬರಬೇಕು ಅಧಿಕಾರಿಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಯಾವುದೇ ವಿದ್ಯಾರ್ಥಿಗಳು ಅನ್ಯಾಯ ಆಗ ಕೂಡದು ಎಂದು ತಿಳಿಸಿದರು ಪ್ರವೇಶಾತಿ ಸಂಬಂಧಿಸಿದಂತೆ ಜಿಪಂ ಸಿ.ಇ.ಓ. ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಮಕ್ಕಳ ದಾಖಲಾತಿಗೆ ಇರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳನ್ನು ಬಗೆಹರಿಸಿ ಮಕ್ಕಳು ಶಾಲೆಗಳಿಗೆ ದಾಖಲಾಗಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಉತ್ತಮ ಫಲಿತಾಂಶಕ್ಕೆ ಒತ್ತು ನೀಡಬೇಕು. ಜಿಲ್ಲೆಗೆ ಇನ್ನು ಹೆಚ್ಚಿನ ಫಲಿತಾಂಶ ತರಲು ಡಿ.ಸಿ. ಮತ್ತು ಸಿ.ಇ.ಓ. ವಿಶೇಷ ತರಗತಿ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದರು ಅವಶ್ಯವಿರುವ ಸರ್ಕಾರಿ ಶಾಲೆಗಳಿಗೆ “ಸ್ಮಾರ್ಟ್ ಕ್ಲಾಸ್ ರೂಂ ” ಗಳನ್ನು ಕಲ್ಪಿಸಬೇಕು. ಕ್ಷೇತ್ರ ಶಿಕ್ಷಣಾದಿಕಾರಿಗಳು ತಮ್ಮ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿನೀಡಿ ಅಲ್ಲಿನ ವಸ್ತುಸ್ಥಿತಿ ಅರಿತು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚು ಕಾಳಜಿವಹಿಸಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದರು





