ಬೆಂಗಳೂರು: ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮೇಲೆ ಪುಂಡರಿಂದ ಹಲ್ಲೆ ಗುರುವಾರ ತಡರಾತ್ರಿ ಮಹದೇವಪುರ ಮುಖ್ಯ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಡೆಲಿವರಿ ಬಾಯ್ ಒಬ್ಬನ ಮೇಲೆ ಬೈಕ್ ಸವಾರರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಡೆಲಿವರಿ ಬಾಯ್ ತನ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ದಿಢೀರನೆ ಬೈಕ್ ಸವಾರರಿಗೆ ಅಡ್ಡ ಬಂದಿದ್ದರಿಂದ ಅವರು ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಇದರಿಂದ ಕೋಪಗೊಂಡ ಯುವಕರು ಡೆಲಿವರಿ ಬಾಯ್ ಮೇಲೆ ಮುಗಿಬಿದ್ದು, ಆತನನ್ನು ಅಮಾನವೀಯವಾಗಿ ಥಳಿಸಿದ್ದಾರೆ. ಈ ಘಟನೆ ಸಾರ್ವಜನಿಕರ ಸ್ಥಳದಲ್ಲೇ ನಡೆದಿದ್ದು, ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ





