ಬೀದರ್: ಚಾಂಗ್ಲೆರಾ ಗ್ರಾಮಕ್ಕೆ ಡಿಸಿ ಭೇಟಿ ಬೀದರ್ ಜಿಲ್ಲೆಯ ಹುಮ್ನಾಬಾದ್ ವಿಧಾನಸಭಾ ಕ್ಷೇತ್ರದ ಚಾಂಗ್ಲಲೇರ ಗ್ರಾಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಭೇಟಿ ನೀಡಿ, ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಮತ್ತು ರಸ್ತೆ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಅವರು ಸೂಚಿಸಿದರು





