Home Uncategorized ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

0
ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ

ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ ಡಾ.ರಾಜ್ ಕುಮಾರ್ ಅವರನ್ನು ಸ್ಮರಿಸಿ ಸಿನಿಮಾಗಳ ಸಮಾಜಿಕ ಜವಾಬ್ದಾರಿ ಬಗ್ಗೆ ನುಡಿದ ಸಿ.ಎಂ ಬೆಂಗಳೂರು :ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದರು. ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು. ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನೆರವಾಗಲಿ ಎಂದರು

LEAVE A REPLY

Please enter your comment!
Please enter your name here

error: Content is protected !!