ಯಾದಗಿರಿ ತಾಲೂಕಿನ ಅಬ್ಬೆತುಮಕೂರಿನ ಅನುಗ್ರಹ ಕ್ಷೇತ್ರ ಶ್ರೀ ವಿಶ್ವಾರಾಧ್ಯರ ಜಾತ್ರೆಯು ಇದೆ 22 ರಂದು ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಅಬ್ಬೆತುಮಕೂರಿನ ಶ್ರೀ ವಿಶ್ವಾರಾಧ್ಯಸಿದ್ದ ಸಂಸ್ಥಾನದ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ಹೇಳಿದ್ದಾರೆ ಅವರು ಅಬ್ಬೆತುಮಕೂರಿನ ಶ್ರೀ ಮಠದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,ಜಾತ್ರೆ ಅಂಗವಾಗಿ ಶ್ರೀ ವಿಶ್ವರಾಧ್ಯರ ಪುರಾಣ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.ಇದೆ 21 ರಂದು ಸಾಧುಸಂತರ ಧ್ವನಿ ಕಾರ್ಯಕ್ರಮ ನಡೆಯಲಿದೆ.22 ರಂದು ಶ್ರೀಮಠದ ಆವರಣದಲ್ಲಿ ರಥಾಂಗ ಹೋಮ ,ಹಲವಾರು ಧಾರ್ಮಿಕ ಕಾರ್ಯಕ್ರಮ ನಂತರ ಅದ್ದೂರಿಯಾಗಿ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.ಜಾತ್ರೆಯಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಜಗದ್ಗುರು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಾಧೀಶರು,ಸಚಿವರಾದ ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದರು