ಬೂದಿಕೋಟೆಯ ನವಜ್ಯೋತಿ ಕೋ ಆಪರೇಟಿವ್ ಸೊಸೈಟಿ ಕಚೇರಿ ಶಾಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡಕ್ಕೆ ಬೆಂಕಿ ಬಿದ್ದು ಕಚೇರಿಯಲ್ಲಿದ್ದ ಕಂಪ್ಯೂಟರ್ ಹಾಗೂ ದಾಖಲೆಗಳು ಸುಟ್ಟು ಭಸ್ಮವಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬೇಟಿಕೊಟ್ಟು ಕಚೇರಿಯ ಬೀಗ ಮುರಿದು ಬೆಂಕಿಯನ್ನು ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ





