Home Uncategorized ಬೆಳೆ ಕಟಾವು ಅಡ್ಡಿಪಡಿಸಿದರೆ ಎಫ್ಐಆರ್: ಜಿಲ್ಲಾಧಿಕಾರಿ ಎಚ್ಚರಿಕೆ

ಬೆಳೆ ಕಟಾವು ಅಡ್ಡಿಪಡಿಸಿದರೆ ಎಫ್ಐಆರ್: ಜಿಲ್ಲಾಧಿಕಾರಿ ಎಚ್ಚರಿಕೆ

0

ಬೆಳೆ ಕಟಾವು ಅಡ್ಡಿಪಡಿಸಿದರೆ ಎಫ್ಐಆರ್: ಜಿಲ್ಲಾಧಿಕಾರಿ ಎಚ್ಚರಿಕೆ ಕಲಬುರಗಿ, ಏಪ್ರಿಲ್.18.(ಕರ್ನಾಟಕ ವಾರ್ತೆ) ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳಿಗೆ ಅಡ್ಡಿಪಡಿಸುವ ಅಥವಾ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಬಿ. ಪೌಜಿಯಾ ತರುನ್ನಮ್ ಅವರು ಹೇಳಿದರು. ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಥಮ ತ್ರೈಮಾಸಿಕ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳೆ ಕಟಾವು ಪ್ರಯೋಗಗಳ ವೇಳೆ ವಿಮಾ ಸೌಲಭ್ಯದ ದುರುಪಯೋಗಕ್ಕಾಗಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಯತ್ನಿಸುವವರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಬೇಕು. ಅತಿಯಾದ ಒತ್ತಡವಿರುವ ಪ್ರದೇಶಗಳಲ್ಲಿ ಪೊಲೀಸ್ ರಕ್ಷಣೆ ಪಡೆದು ಪಾರದರ್ಶಕವಾಗಿ ಕಟಾವು ಪ್ರಕ್ರಿಯೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದರು. ಇದೇ ವೇಳೆ ಜನನ -ಮರಣ ನೋಂದಣಿ ಪ್ರಕ್ರಿಯೆಯಲ್ಲಿನ ಲೋಪಗಳ ಬಗ್ಗೆ ಜಿಲ್ಲಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. E-Janama ಪೋರ್ಟಲ್ನಲ್ಲಿ ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡುತ್ತಿರುವುದು ಹಾಗೂ ಪ್ರಮಾಣಪತ್ರ ವಿತರಣೆಯಲ್ಲಿ 30 ದಿನಗಳಿಗಿಂತ ಹೆಚ್ಚು ವಿಳಂಬ ಮಾಡುತ್ತಿರುವುದು ಅಕ್ಷಮ್ಯ. ಇಂತಹ ಪ್ರಕರಣಗಳಲ್ಲಿ ಕರ್ತವ್ಯ ಲೋಪ ಎಸಗುವ ನೊಂದಣಾಧಿಕಾರಿ ಹಾಗೂ ಉಪ ನೊಂದಣಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಜನನ ಮರಣ ನೋಂದಣಿ ಪ್ರಕ್ರಿಯೆಯಲ್ಲಿ ಆಗುವಂತಹ ತಾಂತ್ರಿಕ ಸಮಸ್ಯೆಗಳಿಗೆ ಕುರಿತು ಹಾಗೂ ಸದರಿ ಸಮಸ್ಯೆಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ವಿಶೇಷ ಕಾರ್ಯಾಗಾರ ನಡೆಸುವಂತೆ ಯಾಕೆಂದರೆ ಹೋಗ್ತದೆ ಜಿಲ್ಲಾ ಸಂಖ್ಯಾ ಸಂಗ್ರಣಾಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಗೆ ಗೈರಾದ ಅಧಿಕಾರಿಗಳು, ಮುಂದಿನ ಸಭೆಗೆ ಕಡ್ಡಾಯವಾಗಿ ಹಾಜರಿರಲು ತಾಕೀತು ಮಾಡಿದರು. ಕಟಾವು ಪ್ರಯೋಗದಲ್ಲಿ ಕಳಪೆ ಪ್ರದರ್ಶನ ನೀಡಿದ 10 ಪ್ರಯೋಗಗಳನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ. ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪಬೇಕು, ಇದರಲ್ಲಿ ಹಸ್ತಕ್ಷೇಪ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಎಸ್ ಎಸ್ ಮಠಪತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸಮದ್ ಪಟೇಲ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಸಂತೋಷ ಇನಾಮದಾರ್, ಎಮ್.ಡಿ.ಇಮ್ರಾನ್ ಅಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಶರಣಬಸವ ಸಹಾಯಕ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

error: Content is protected !!